ಸಿಎಂ ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

Spread the love

ಸಿಎಂ ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

ಬೆಳಗಾವಿ/ ಗೋವಾ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಚರ್ಚೆಗಳಿಗೆ ಜು.25 ರಂದು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಯನ್ನು ನಿರೀಕ್ಷಿಸಲಾಗುತ್ತಿತ್ತು. ಆದರೆ ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ.

ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ “ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿಂದ ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿದ್ದೇನೆ. ನಾಳೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ” ಎಂದು ಹೇಳಿರಿವುದು ಕುತೂಹಲ ಮೂಡಿಸಿದೆ.

ಇತ್ತ ಗೋವಾಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಬದಲಾವಣೆ ವಿಷಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತ ಹೊಸ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಪ್ರಹ್ಲಾದ್ ಜೋಷಿ ಅವರ ಬೆಂಗಳೂರು ಭೇಟಿಯನ್ನೂ ಸಿಎಂ ಬದಲಾವಣೆ ಸಾಧ್ಯತೆಗೆ ಪುಷ್ಟಿ ನೀಡುವಂತಿದೆ. ಇನ್ನು ಸಚಿವ ಮುರುಗೇಶ್ ನಿರಾಣಿಯವರು ದೆಹಲಿಗೆ ತೆರಳಿದ್ದಾರೆ.

ಇವೆಲ್ಲದರ ನಡುವೆ ಜು.25 ರಂದು ರಾತ್ರಿ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸಂಘಟನಾ ಕಾರ್ಯದರ್ಶಿ ಬಿಎ ಲ್ ಸಂತೋಷ್, ಜೆಪಿ ನಡ್ಡಾ ಅವರು ಸಭೆ ನಡೆಸಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.


Spread the love