Home Mangalorean News Kannada News ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ನಳಿನ್‍ಕುಮಾರ್ ಕಟೀಲ್

ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ನಳಿನ್‍ಕುಮಾರ್ ಕಟೀಲ್

Spread the love

ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ನಳಿನ್‍ಕುಮಾರ್ ಕಟೀಲ್

ಮಂಗಳೂರು : ಬಹುಸಂಖ್ಯಾತರನ್ನು ಕಡೆಗಣಿಸುವ ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ರಾಜ್ಯ ಬಜೆಟ್‍ನಲ್ಲಿಯೂ ಮುಂದುವರಿದಿದೆ. ಕೇವಲ ಅಲ್ಪಸಂಖ್ಯಾತರನ್ನು ಮಾತ್ರ ಓಲೈಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಕರಾವಳಿ ಭಾಗವನ್ನು ಬಜೆಟ್‍ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಚುನಾವಣೆಯನ್ನು ದೃಷ್ಟಿಯಲ್ಲಿರಿಸಿ ಜನರನ್ನು ಮರುಳು ಮಾಡಲು ಮಂಡಿಸಿದ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್‍ಕುಮಾರ್ ತಿಳಿಸಿದ್ದಾರೆ.

ಕಾರಾಗೃಹ ನಿರ್ಮಾಣ, ಬಂದರು ಅಭಿವೃದ್ಧಿ ಬಗ್ಗೆ ಈ ಹಿಂದಿನ ಬಜೆಟ್‍ಗಳಲ್ಲಿ ಪ್ರಕಟಿಸಲಾಗಿತ್ತು. ಇದೀಗ ಮತ್ತೆ ಬಜೆಟ್‍ನಲ್ಲಿ ಘೋಷಿಸಲಾಗಿದೆ. ಯಾವುದೇ ಸ್ಪಷ್ಟತೆ ಇಲ್ಲದೆ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. ಕರಾವಳಿ ಜಿಲ್ಲೆಗೆ ಕಳೆದ 4 ಬಜೆಟ್‍ನಲ್ಲಿ ಪ್ರಕಟಿಸಿದ ಯೋಜನೆಗಳು ಕೇವಲ ಘೋಷಣೆಗೆ ಸೀಮಿತವಾಗಿದೆ. ಸುಳ್ಳಿನ ಕಂತೆಯಾಗಿರುವ ಈ ಬಜೆಟ್ ಬಗ್ಗೆ ಜನತೆಗೆ ಯಾವುದೇ ಭರವಸೆ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version