ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ

Spread the love

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ

ಬೆಂಗಳೂರು: ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ರಾಜಕೀಯವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದಲೇ ಸುದ್ದಿಯಲ್ಲಿರುತ್ತಿದ್ದ ಸಿದ್ದರಾಮಯ್ಯ-ಈಶ್ವರಪ್ಪ ಇಂದು ಆತ್ಮೀಯವಾಗಿ ಮಾತನಾಡಿದರು. ರಾಜಕೀಯ ನಾಯಕರ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವೇಳೆ ಸಚಿವ ಈಶ್ವರಪ್ಪ ಮಾಜಿ ಮುಖ್ಯಮಂತ್ರಿಗಳ ಕಾಲೆಳೆದು ಹಾಸ್ಯ ಚಟಾಕಿ ಹಾರಿಸಿದ್ದು ವಿಶೇಷವಾಗಿತ್ತು.

ಸಿದ್ದರಾಮಯ್ಯ ಅವರನ್ನು ಮಾತನಾಡಿಸಿದ ಈಶ್ವರಪ್ಪ ನಿಮಗೂ ಹಾರ್ಟ್ ಇದೆ ಅಂತ ಗ್ಯಾರೆಂಟಿ ಆಯ್ತು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇದಕ್ಕೆ ನಗುತ್ತಲೇ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ನೀವೇನು ಇಲ್ಲ ಅಂತ ಅಂದ್ಕೊಂಡಿದ್ರಾ ಎಂದು ಕೇಳಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love