ಸಿದ್ದರಾಮಯ್ಯ ಪರ ಮಳೆಯಲ್ಲೇ ಮತಯಾಚನೆ

Spread the love

ಸಿದ್ದರಾಮಯ್ಯ ಪರ ಮಳೆಯಲ್ಲೇ ಮತಯಾಚನೆ

ನಂಜನಗೂಡು: ಸಿದ್ದರಾಮಯ್ಯ ಪರವಾಗಿ ಅವರ ಪುತ್ರ ಶಾಸಕ ಡಾ. ಯತೀಂದ್ರ ಅವರು ವರುಣಾ ಕ್ಷೇತ್ರಕ್ಕೆ ಸೇರುವ ಆಲತ್ತೂರು, ಮೂಡಹಳ್ಳಿ, ಮಲ್ಲರಾಜಯ್ಯನಹುಂಡಿ, ಹೊಸಕೋಟೆ ಮೊದಲಾದ ಕಡೆಗಳಲ್ಲಿ ಸುರಿಯುವ ಮಳೆಯಲ್ಲಿಯೇ ಮತಯಾಚನೆ ಮಾಡಿದರು.

ಬಳಿಕ ಮಾತನಾಡಿದ ಅವರು ನಮ್ಮ ತಂದೆ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಎಲ್ಲ ಜನರಿಗೂ ಅನೇಕ ಸೌಲಭ್ಯಗಳು ದೊರಕುವಂತೆ ಮಾಡಿ ನುಡಿದಂತೆ ನಡೆದ ಸರ್ಕಾರ ಎಂಬ ಹೆಸರು ಪಡೆದಿದ್ದಲ್ಲದೆ, ಅಂದು ಜಾರಿಗೊಳಿಸಿದ್ದ ಅನೇಕ ಜನಪರ ಯೋಜನೆಗಳಾದ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ, ಶೂ ಭಾಗ್ಯ, ವಿದ್ಯಾಸಿರಿ, ಕೃಷಿಭಾಗ್ಯ, ಕೃಷಿಯಂತ್ರಧಾರೆ, ಕ್ಷೀರಧಾರೆ, ಮತ್ತು ಮೈತ್ರಿ, ಮನಸ್ವಿನಿ, ಶಾದಿಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

ನುಡಿದಂತೆ ನಡೆದ ಸರ್ಕಾರ ಎಂದು ಜನರು ಮೆಚ್ಚುವಂತಾಗಿತ್ತು, ಮತ್ತೆ ಈಗ ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ತಲಾ 10 ಕೆ.ಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿಯಲ್ಲಿ ಪ್ರತಿಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದಲ್ಲದೇ ಪ್ರತಿ ಕುಟುಂಬದ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಕುಟುಂಬದ ಯಜಮಾನಿಯ ಬ್ಯಾಂಕ್ ಅಕೌಂಟ್‌ಗೆ ನೇರವಾಗಿ 2000 ರೂ. ನೀಡಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಹಿಂದೆ ನೀಡಿದ್ದ ಹಲವಾರು ಯೋಜನೆಗಳನ್ನು ಮುಂದುವರೆಸಲು ಮುಂದಿನ ತಿಂಗಳು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿ ಕಾಂಗ್ರೇಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮತನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ಅದ್ಯಕ್ಷ ಎಸ್.ಸಿ.ಬಸವರಾಜು, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ರಂಗಸ್ವಾಮಿ, ಕೆ.ಪಿ.ಸಿ.ಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ದಕ್ಷಿಣಾ ಮೂರ್ತಿ, ಮಹೇಶ್, ಸುರೇಶ್, ಸೇರಿದಂತೆ ಎಲ್ಲಾ ಗ್ರಾಮಗಳ ಹಲವಾರು ಮುಖಂಡರುಗಳು, ಕಾರ್ಯಕರ್ತರು ಹಾಜರಿದ್ದರು.


Spread the love