ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಂಸದ ನಳಿನ್ ಕುಮಾರ್ ಒತ್ತಾಯ

Spread the love

ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಂಸದ ನಳಿನ್ ಕುಮಾರ್ ಒತ್ತಾಯ

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಆಂಟಿ ಕುಳಿತುಕೊಂಡಿದ್ದಾರೆ. ಸಿದ್ದರಾಮಯ್ಯ ನವರು ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು. ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸ್ರಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಳು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನಿಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Spread the love
Subscribe
Notify of

0 Comments
Inline Feedbacks
View all comments