ಸಿದ್ದರಾಮಯ್ಯ ಸಿಎಂ, ಡಿಕೆಶಿ ಏಕೈಕ ಡಿಸಿಎಂ ಕಾಂಗ್ರೆಸ್ ನಿಂದ ಅಧಿಕೃತ ಘೋಷಣೆ

Spread the love

ಸಿದ್ದರಾಮಯ್ಯ ಸಿಎಂ, ಡಿಕೆಶಿ ಏಕೈಕ ಡಿಸಿಎಂ ಕಾಂಗ್ರೆಸ್ ನಿಂದ ಅಧಿಕೃತ ಘೋಷಣೆ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್  ಅವರೊಬ್ಬರೇ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ವರಿಷ್ಠರಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲ ಪ್ರಕಟಿಸಿದ್ದಾರೆ.

ಇಲ್ಲಿ ಮೇ 18, ಗುರುವಾರ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಇಬ್ಬರು ವರಿಷ್ಠರು ಕರ್ನಾಟಕ ಸಿಎಂ ಮತ್ತು ಡಿಸಿಎಂ ಆಯ್ಕೆ ನಿರ್ಧಾರವನ್ನು ತಿಳಿಸಿದ್ದಾರೆ.  ಮೇ 20 ಮಧ್ಯಾಹ್ನ 12ಗಂಟೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಜ್ಯವನ್ನು ಮುನ್ನಡೆಸಲು ಸಮರ್ಥರಿದ್ದಾರೆ. ಕಾಂಗ್ರೆಸ್​ನಲ್ಲಿ ಇನ್ನೂ ಕೆಲವರು ಸಿಎಂ ಆಗಲು ಅರ್ಹರಿದ್ದಾರೆ. ಆದರೆ, ಒಬ್ಬರಿಗೆ ಮಾತ್ರ ಸಿಎಂ ಅಗಲು ಸಾಧ್ಯ. ಎಐಸಿಸಿ ಅಧ್ಯಕ್ಷರು (ಮಲ್ಲಿಕಾರ್ಜುನ ಖರ್ಗೆ) ಸಿದ್ದರಾಮಯ್ಯರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಣದೀಪ್ ಸುರ್ಜೆವಾಲ ಹೇಳಿದರು.


Spread the love

Leave a Reply

Please enter your comment!
Please enter your name here