
ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನೋತ್ಸವ ಅಮೃತ ಮಹೋತ್ಸವಕ್ಕೆ ಪೂರ್ವಭಾವಿ ಸಭೆ
ಆ.3ರಂದು ದಾವಣೆಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ, ಕರ್ನಾಟಕ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನೋತ್ಸವ ಅಮೃತ ಮಹೋತ್ಸವಕ್ಕೆ ತೆರಳುವ ಪೂರ್ವಭಾವಿ ಸಭೆ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಸಮಾವೇಶಕ್ಕೆ ಪ್ರತೀ ವಿಧಾನಸಭಾ ಕ್ಷೇತ್ರದ ಬ್ಲಾಕಿಗಳಿಂದ ಕಾರ್ಯಕರ್ತರು, ನಾಯಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಯಿತು. ಜಿಲ್ಲೆಯಿಂದ ಕನಿಷ್ಠ 50 ಬಸ್ಸುಗಳಲ್ಲಿ ತೆರಳುವುದಾಗಿ ತೀರ್ಮಾನಿಸಲಾಯಿತು. ಈ ಕುರಿತಾಗಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಉಸ್ತುವಾರಿಗಳನ್ನು ನೇಮಿಸಲಾಯಿತು.
ಸೋನಿಯಾ ಗಾಂಧಿ ಅವರಿಗೆ ಇ.ಡಿ ಕಿರುಕುಳ ನೀಡುತ್ತಿರುವ ವಿರುದ್ಧ ಜುಲೈ 22ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಹಾಗೂ ಆ.15 ರಂದು ಸ್ವಾತಂತ್ರ್ಯೋತ್ಸವದಂದು ಬ್ಲಾಕ್ ಮಟ್ಟದಲ್ಲಿ 15 ಕಿ.ಮೀ ಪಾದಯಾತ್ರೆ ನಡೆಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಚಂದ್ರ ಜೈನ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮೊಯ್ದೀನ್ ಬಾವ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಕೃಪಾ ಆಳ್ವ, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಹರಿನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳು, ಮ.ನ.ಪಾ ಸದಸ್ಯರು, ಮಾಜಿ ಜಿಲ್ಲಾ-ತಾಲೂಕು ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್ ಸ್ವಾಗತಿಸಿದರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್ ನಿರ್ವಹಿಸಿದರು.