ಸಿದ್ಧಾಪುರ: ಬುರುಡೆ ಫಾಲ್ಸ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು

ಸಿದ್ಧಾಪುರ: ಬುರುಡೆ ಫಾಲ್ಸ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು

ಸಿದ್ಧಾಪುರ: ಪ್ರವಾಸಕ್ಕೆಂದು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬುರುಡೆ ಫಾಲ್ಸ್ ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಶಿರಸಿ ಮೂಲದ ಮುರಳಿ ,ಸಿದ್ಧಾಪುರದ ಅಭಿಷೇಕ್ ನಾಯ್ಕ, ಕೇರಳ ಮೂಲದ ಸಾಯಿ ಎಂದು ಗುರುತಿಸಲಾಗಿದೆ. ಅವರು ಸಿದ್ಧಾಪುರ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಜೆಯ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸಿದ್ಧಾಪುರ ಪೊಲೀಸರು ಭೇಟಿ ನೀಟಿದ್ದು, ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.