
ಸಿಸಿಬಿ ಕಾರ್ಯಾಚರಣೆ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ 13 ಕೆ ಜಿ ಗಾಂಜಾ ವಶ
ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆ ಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ.
ದಿನಾಂಕ: 11-03-2023 ರಂದು ಸಂಜೆ ವೇಳೆ ಮಂಗಳೂರು ನಗರದ ಕಂಕನಾಡಿ ರೈಲ್ವೆ ಸ್ಟೇಶನ್ ನ ಅಳಪೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ರವರ ನೇತ್ರತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ
1. ಅಬ್ದುಲ್ ಸಾಧಿಕ್ (35), ವಾಸ: ಮನೆ ನಂಬರ್: ಬಂಗ್ಲ ಗುಡ್ಡೆ ಹೌಸ್, ಅಲಡ್ಕ, ಪಾಣೆಮಂಗಳೂರು ಬಂಟ್ವಾಳ 2. ನವಾಜ್(24), ವಾಸ: ಗಾಂಧಿನಗರ ಮನೆ, ಕಕ್ಕಿಂಜೆ ಗ್ರಾಮ, ಬೆಳ್ತಂಗಡಿ ತಾಲೂಕು,
ಎಂಬವರನ್ನು ವಶಕ್ಕೆ ಪಡೆದುಕೊಂಡು ಸುಮಾರು 3,90,000/-ರೂಪಾಯಿ ಮೌಲ್ಯದ 13 ಕೆ ಜಿ ಗಾಂಜಾ, ಮೊಬೈಲ್ ಫೋನ್-2 ನಗದು ರೂ.5610/- ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಒಟ್ಟು ಮೌಲ್ಯ ರೂ. 4,15,610/-ಆಗಬಹುದು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳ ಪೈಕಿ ಅಬ್ದುಲ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ಮೈಸೂರು ನಗರದ ಲಷ್ಕರ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಶ್ರೀ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್’ ಎಂ, ಪಿಎಸ್ಐ ರಾಜೇಂದ್ರ, ಎಎಸ್ಐ ಶಶಿಧರ ಶೆಟ್ಟಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.