
ಸಿಸಿಬಿ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಸೆರೆ
ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ.
ಮಂಗಳೂರು ನಗರದ ಕಂಕನಾಡಿ- ಪಂಪ್ವೆಲ್ ಪರಿಸರದಲ್ಲಿ KA-19-HA-2107 ನಂಬ್ರದ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಕೋಡಿಕಲ್ ನಿವಾಸಿ . ಮೊಹಮ್ಮದ್ ಅಝೀಝ್ @ ಅಜೀಜ್, ಪ್ರಾಯ(40) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ 2 ಕೆ ಜಿ ತೂಕದ ಆಂದಾಜು ರೂ. 50,000/- ಮೌಲ್ಯದ ಗಾಂಜಾ, KA-19-HA-2107 ಸುಝುಕಿ ಅಕ್ಸಸ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,05,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಯ ವಿರುದ್ಧ ಈ ಹಿಂದೆ 2022 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.