ಸಿಸಿಬಿ ಕಾರ್ಯಾಚರಣೆ: ನಿಷೇಧಿತ ಮಾದಕ ವಸ್ತು ಹೊಂದಿದ ವ್ಯಕ್ತಿಯ ಬಂಧನ

Spread the love

ಸಿಸಿಬಿ ಕಾರ್ಯಾಚರಣೆ: ನಿಷೇಧಿತ ಮಾದಕ ವಸ್ತು ಹೊಂದಿದ ವ್ಯಕ್ತಿಯ ಬಂಧನ

ಮಂಗಳೂರು: ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿರುತ್ತಾರೆ.

ಬಂಧಿತ ಆರೋಪಿಯನ್ನು ದೇರಳಕಟ್ಟೆ ನಿವಾಸಿ ಅಕ್ಷತ್ ಕುಮಾರ್ (34) ಎಂದು ಗುರುತಿಸಲಾಗಿದೆ

ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1, ನಗದು ರೂ. 20,880/-, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಇವುಗಳ ಒಟ್ಟು ಮೌಲ್ಯ ರೂ 4,17,380/-ಆಗಬಹುದು. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಹಾಗೂ ಕೊಣಾಜೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love