
ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ ಆರೋಪಿ ಸೆರೆ
ಮಂಗಳೂರು: ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಹೊಂದಿಕೊಂಡು ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿರುತ್ತಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವಾದ ಎಂಡಿಎಂಎ(Methylene dioxy methamphetamine) MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಪಡೀಲ್ ಕೆಂಬಾರ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಹೊಂದಿದ ಆರೋಪಿ ಕುಲಶೇಖರ ನಿವಾಸಿ ಹರ್ಷಿತ್ ಶೆಟ್ಟಿ(29 ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,35,500/-ಆಗಬಹುದು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಮತ್ತು ಹಲ್ಲೆ ಪ್ರಕರಣ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿನ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಗಾಂಜಾ ಸೇವನೆ ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ ಅಪಹರಣ ಮತ್ತು ಸರಕಳ್ಳತನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.