ಸೀತಂಗೋಳಿಯಲ್ಲಿ ಮೀನು ವ್ಯಾಪಾರಿಗೆ ಚೂರಿ ಇರಿತ
ಕೇರಳ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ಯುವಕನಿಗೆ ಚೂರಿ ಇರಿದ ಘಟನೆ ನಡೆದಿದೆ.
ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್ ಎಂಬತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ ಚಾಕನ್ನು ಕುತ್ತಿಗೆಯಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇರ್ತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರಿಂದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ.