ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

Spread the love

ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ನವದೆಹಲಿ: ಬಹುನಿರೀಕ್ಷಿತ ಹಿಜಾಬ್ ವಿವಾದ  ಕುರಿತು ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಗುರುವಾರ ಒಮ್ಮತದ ತೀರ್ಮಾನಕ್ಕೆ ಬರಲಾಗದೆ ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದೆ.

ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂ ಕೋರ್ಟ್ಮು ಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.

ಇಂದು ಅಂತಿಮ ತೀರ್ಪು ಪ್ರಕಟವಾಗಬೇಕಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಮೂರ್ತಿಗಳು ಹಿಜಾಬ್ ವಿವಾದ ಕುರಿತು ಭಿನ್ನ ತೀರ್ಪುಗಳನ್ನು ನೀಡಿರುವುದರಿಂದ ನಿರ್ದಿಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಉಲ್ಲೇಖಿಸಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ.


Spread the love