ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

Spread the love

ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೀಡಿರುವ ವಿಭಿನ್ನ ತೀರ್ಪನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಸ್ವಾಗತಿಸಿದ್ದಾರೆ.

ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು “ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತವಾಗಿದ್ದು ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ. ತವಕ್ಕಲ್ತು ಅಲ್ಲಾ” ಎಂದು ಹೇಳಿದ್ದಾರೆ.


Spread the love