ಸುಬ್ರಹ್ಮಣ್ಯದಲ್ಲಿ ಘರ್ಷಣೆ ಪ್ರಕರಣ : ಚೈತ್ರಾ ಕುಂದಾಪುರ ಸಹಿತ 6 ಮಂದಿಗೆ ನ್ಯಾಯಾಂಗ ಬಂಧನ

Spread the love

ಸುಬ್ರಹ್ಮಣ್ಯದಲ್ಲಿ ಘರ್ಷಣೆ ಪ್ರಕರಣ : ಚೈತ್ರಾ ಕುಂದಾಪುರ ಸಹಿತ 6 ಮಂದಿಗೆ ನ್ಯಾಯಾಂಗ ಬಂಧನ

ಸುಳ್ಯ : ಸುಬ್ರಹ್ಮಣ್ಯದಲ್ಲಿ ಸಂಘ ಪರಿವಾರ ಮುಖಂಡರ ನಡುವೆ ಬುಧವಾರ ನಡೆದ ಘರ್ಷಣೆಗೆ ಸಂಬಂಧಿಸಿ ಚೈತ್ರಾ ಕುಂದಾಪುರ ಸಹಿತ 7 ಮಂದಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂಥೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರರನ್ನು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಗುರುವಾರ ಸಂಜೆ ಹಾಜರುಪಡಿಸಿದರು. ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಚೈತ್ರಾ ಕುಂದಾಪುರ, ಸುದಿನ, ವಿನಯ ಮಣಿಕಂಠ, ನಿಖಿಲ್, ಹರೀಶ್ ಖಾರ್ವಿ ಹಾಗೂ ಹರೀಶ್ ನಾಯಕ್ ವಿರುದ್ದ ಹಲ್ಲೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಪದ ಬಳಕೆ ಹಿನ್ನಲೆಯಲ್ಲಿ ಕೇಸು ದಾಖಲಿಸಿ ನ್ಯಾಯಾಂಗ ಬಂಧನ ವಿಧಿಸಿದೆ.

ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ ಪಂಜ ಹಾಗೂ ಅವರ ತಂಡದ ಮೇಲೆ ಚೈತ್ರಾ ಕುಂದಾಪುರ ಹಾಗೂ ಅವರ ತಂಡ ಹಲ್ಲೆ ನಡೆಸಿದ್ದು, ಈ ಸಂಬಂಧ ಗುರುಪ್ರಸಾದ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಘಟನೆ ಸಂಬಂಧ ಚೈತ್ರಾ ಕುಂದಾಪುರ ಕೂಡ ತನ್ನ ಮೇಲೆ ಅಸಭ್ಯವಾಗಿ ವರ್ತಿಸಿ ತಳ್ಳಾಟ ನಡೆಸಿ, ಸರವೊಂದನ್ನು ಕಿತ್ತುಕೊಂಡಿರುವುದಾಗಿ ಪ್ರತಿದೂರು ನೀಡಿದ್ದಾಳೆ.


Spread the love