ಸುಬ್ರಹ್ಮಣ್ಯ: ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ

Spread the love

ಸುಬ್ರಹ್ಮಣ್ಯ: ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ
 

ಸುಬ್ರಹ್ಮಣ್ಯ: ಕೆಲವು ದಿನಗಳ ಹಿಂದೆ ಜನಿಸಿದ ಗಂಡು ಮಗುವನ್ನು ತಾಯಿ ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ವ್ಯಾಪ್ತಿಯ ಕೂತ್ಕುಂಜ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿಕಾಡು ಪವಿತ್ರಾ ಮಗುವನ್ನು ಕೊಂದಿರುವ ತಾಯಿ.

10 ದಿನಗಳ ಹಿಂದೆ ಪವಿತ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ.

ಪವಿತ್ರಾ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಣಿಕಂಠ ಅವರನ್ನು ವರ್ಷದ ಹಿಂದೆ ವಿವಾಹವಾಗಿದ್ದು, ಅ. 10ರಂದು ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಗಂಡು ಮಗು ನನಗೆ ಇಷ್ಟವಿಲ್ಲದಿದ್ದರೂ ಹುಟ್ಟಿರುತ್ತದೆ. ಈ ಗಂಡು ಮಗು ನನಗೆ ಬೇಡ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯ ಎದುರಿನ ಬಾವಿಗೆ ಎಸೆದಿದ್ದಾಳೆ. ಅನಂತರ ಆಕೆಯು ರೂಮಿನ ಒಳಗಡೆ ಓಡಿ ಹೋಗಿದ್ದು, ಕೂಡಲೇ ಇತರರಿಗೆ ಮಾಹಿತಿ ತಿಳಿದು ಬಾವಿಗೆ ಇಳಿದು ಮಗುವನ್ನು ತೆಗೆದು ಮೇಲಕ್ಕೆತ್ತಿ ಪಂಜ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪವಿತ್ರಾ ಗರ್ಭಿಣಿಯಾದಾಗ ಆಕೆಗೆ ಹೆಣ್ಣು ಮಗು ಆಗಬೇಕೆಂಬ ಆಸೆ ಇದ್ದು, ಅವಳ ಇಷ್ಟ ನೇರವೇರದೆ ಇದ್ದುದರಿಂದ ಹುಟ್ಟಿದ ಗಂಡು ಮಗುವನ್ನು ಆಕೆ ಬಾವಿಗೆ ಎಸೆದು ಕೊಲೆ ಮಾಡಿದ್ದಾಳೆ ಎಂದು ಸುಬ್ರಹ್ಮಣ್ಯ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ. ಘಟನ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love