ಸುಬ್ರಹ್ಮಣ್ಯ : ಸ್ಕೂಟಿಗೆ ಕಾರು ಢಿಕ್ಕಿ, ನಿವೃತ್ತ ಎಎಸ್‌ಐ ಸಾವು

Spread the love

ಸುಬ್ರಹ್ಮಣ್ಯ : ಸ್ಕೂಟಿಗೆ ಕಾರು ಢಿಕ್ಕಿ, ನಿವೃತ್ತ ಎಎಸ್‌ಐ ಸಾವು
 
ಸುಬ್ರಹ್ಮಣ್ಯ: ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.

ಕುಲ್ಕುಂದ ನಿವಾಸಿ ನಿವೃತ್ತ ಸಹಾಯಕ ಪೊಲೀಸ್‌ ಉಪನಿರೀಕ್ಷಕ ಎ. ಪೆರ್ಗಡೆ ಗೌಡ (67) ಮೃತಪಟ್ಟವರು.

ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಎದುರು ಘಟನೆ ನಡೆದಿದ್ದು, ಡಿವೈಡರ್‌ ಬಳಿ ಸ್ಕೂಟರ್‌ ಅನ್ನು ಬಲಕ್ಕೆ ತಿರುಗಿಸುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಕಡಬ ಆಸ್ಪತ್ರೆಗೆ ದಾಖಲಿಸಲಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಯಾತ್ರಿಕರ ಕಾರು ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಠಾಣೆಗೆ ಪ್ರತ್ಯಕ್ಷದರ್ಶಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


Spread the love