ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

Spread the love

ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಶ್ ಅವರು ಇಂದು (ಏ.05) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರಿದರು.

ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ನನಗೆ ಪ್ರೇರಣಾದಾಯಕವಾಗಿದೆ. ಪ್ರಧಾನಿ ಮೋದಿಯವರು ನುಡಿದಂತೆ ನಡೆಯುತ್ತಿದ್ದಾರೆ. ಅವರ ವಿಕಸಿತ ಭಾರತ ಕನಸು ನನಸಾಗಬೇಕು. ಅದಕ್ಕೆ ನಾನು ಬೆಂಬಲಿಸುವೆ. ಮುಖ್ಯವಾಗಿ ನನ್ನ ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕು. ಮತ್ತು ಸಂಸತ್ತಿನಲ್ಲಿ ಹಿರಿಯ ಬಿಜೆಪಿ ನಾಯಕರು ನನಗೆ ಮಾರ್ಗದರ್ಶನ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ತಮ್ಮ ಅವಧಿಯಲ್ಲಿ ಮಂಡ್ಯ ಜಿಲ್ಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಈ ಎಲ್ಲ ಕಾರಣದಿಂದ ನಾನು ಬಿಜೆಪಿ ಸೇರಿದ್ದೇನೆ ಎಂದರು.


Spread the love