ಸುರತ್ಕಲ್: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು

Spread the love

ಸುರತ್ಕಲ್: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು

ಸುರತ್ಕಲ್‌: ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪುರ ನಿವಾಸಿ ಜಲೀಲ್‌ ಎಂದು ತಿಳಿದು ಬಂದಿದೆ

ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ . ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.


Spread the love