ಸುರತ್ಕಲ್:  ನಿಂತಿದ್ದ ಕಾರಿನ ಮೇಲೆ ಲಾರಿ ಮಗುಚಿ ಓರ್ವ ಮೃತ್ಯು

Spread the love

ಸುರತ್ಕಲ್:  ನಿಂತಿದ್ದ ಕಾರಿನ ಮೇಲೆ ಲಾರಿ ಮಗುಚಿ ಓರ್ವ ಮೃತ್ಯು

ಸುರತ್ಕಲ್: ನಿಂತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದು ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಟ್ಟೆ ಸಿಗ್ನಲ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಕುಲಾಯಿ ಗೋಕುಲನಗರ ನಿವಾಸಿ ಲೋಕನಾಥ ಎಂದು ಗುರುತಿಸಲಾಗಿದೆ.

ಲೋಕನಾಥ ಅವರು ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಕಟ್ಟೆ ಸಿಗ್ನಲ್ ಬಳಿ ರಸ್ತೆಯ ಪಕ್ಕದಲ್ಲಿ ರಸ್ತೆ ದಾಟುವ ಸಲುವಾಗಿ ಕಾರು ನಿಲ್ಲಿಸಿದ್ದರು ಎನ್ನಲಾಗಿದೆ. ಈ ವೇಳೆ ಹಿಂದಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗು ಚಿಬಿದ್ದಿದೆ. ಈ ವೇಳೆ ಕಾರಿನೊಳಗಿದ್ದ ಲೋಕನಾಥ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ.


Spread the love