ಸುರತ್ಕಲ್:‌ ಫಾಝಿಲ್‌ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜಾಮೀನು

Spread the love

ಸುರತ್ಕಲ್:‌ ಫಾಝಿಲ್‌ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜಾಮೀನು

ಮಂಗಳೂರು: ದ.ಕ.ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಪ್ರಕರಣದ ಆರೋಪಿಗಳಾದ ಅಜಿತ್ ಕ್ರಾಸ್ತಾ, ಶ್ರೀನಿವಾಸ್ ಗೆ ಜಾಮೀನು ಆಗಿದೆ. ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್ ಎಂಬಾತನಿಗೆ ನ್ಯಾಯಾಲಯವು ಸೆ.7, 2022ರಂದು ಜಾಮೀನು ಮಂಜೂರು ಮಾಡಿತ್ತು


Spread the love