ಸುರತ್ಕಲ್: ಮಾರಕಾಸ್ತ್ರಗಳಿಂದ ದಾಳಿಗೊಳಗಾದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

Spread the love

ಸುರತ್ಕಲ್: ಮಾರಕಾಸ್ತ್ರಗಳಿಂದ ದಾಳಿಗೊಳಗಾದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಮಂಗಳೂರು: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬೆನ್ನಲ್ಲೇ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸುರತ್ಕಲ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡ ವ್ಯಕ್ತಿಯನ್ನು ಸುರತ್ಕಲ್ ಮಂಗಳ ಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ.

 ಫಾಝಿಲ್ ಅವರು ಸುರತ್ಕಲ್ ಜವಳಿ ಅಂಗಡಿಯ ಮುಂಬಾಗದಲ್ಲಿ ನಿಂತುಕೊಂಡಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದು ಗಂಭೀರ ಗಾಯಗೊಂಡ ಫಾಝಿಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಸ್ಥಳಕ್ಕೆ ಸುರತ್ಕಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

Leave a Reply

Please enter your comment!
Please enter your name here