ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ – ಒರ್ವ ಬಲಿ

Spread the love

ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ – ಒರ್ವ ಬಲಿ

ಮಂಗಳೂರು: ವ್ಯಕ್ತಿಯೋರ್ವನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಸುಳ್ಯದ ಶಾಂತಿನಗರದಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ.

ಮೃತ ವ್ಯ್ಕತಿಯನ್ನು ಸುಳ್ಯ ನಿವಾಸಿ ಸಂಪತ್ ಕುಮಾರ್ (35) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಕೊಡಗಿನಿ ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಎಂಬವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ.

ಗುರುವಾರ ನಸುಕಿನ ವೇಳೆ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸಂಪತ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love