ಸುವರ್ಣ ತ್ರಿಭುಜ ಬೋಟ್ ನಾಪತ್ತೆ- ಮೀನುಗಾರರ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

Spread the love

ಸುವರ್ಣ ತ್ರಿಭುಜ ಬೋಟ್ ನಾಪತ್ತೆ- ಮೀನುಗಾರರ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಹಾಗೂ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣದ ಶೀಘ್ರ ತನಿಖೆ ನಡೆಸಿ ಮೀನುಗಾರರನ್ನು ರಕ್ಷಿಸುವಂತೆ ಉಡುಪಿ ಶಾಸಕರಾದ ರಘುಪತಿಭಟ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ಬೆಂಗಳೂರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಸೀತಾರಾಮ್ ಅವರನ್ನು ಭೇಟಿಯಾಗಿ ಆಗ್ರಹಿಸಿದರು.

ಈ ಬಗ್ಗೆ ಸೂಕ್ತವಾಗಿ ಸ್ಪಂದಿಸಿದ ರಕ್ಷಣಾ ಸಚಿವರು ಮೀನುಗಾರರ ರಕ್ಷಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಹಾಗೂ ಅತಿ ಶೀಘ್ರದಲ್ಲಿಯೇ ಮಲ್ಪೆಗೆ ಖುದ್ದಾಗಿ ಭೇಟಿ ನೀಡಿ ನೌಕಾ ಪಡೆಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ನಿಯೋಗದಲ್ಲಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಸತೀಶ್ ಕುಂದರ್, ಅಖಿಲ ಭಾರತೀಯ ಮೀನುಗಾರರ ವೇದಿಕೆಯ ಪದಾಧಿಕಾರಿಗಳಾದ ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಶಶಿಧರ್ ತಿಂಗಳಾಯ, ಗೋಪಾಲ ಆರ್ ಕೆ, ಹರೀಶ್ ಕುಂದರ್ ಹಾಗೂ ನಾಪತ್ತೆಯಾದ ಮೀನುಗಾರರ ಕುಟುಂಬ ಸದಸ್ಯರಾದ ಗಣೇಶ್ ಕೋಟ್ಯಾನ್, ಪ್ರಮೋದ್ ಸಾಲ್ಯಾನ್, ಪಾಂಡು ಮೊಗೇರ ಮೊದಲಾದವರು ಉಪಸ್ಥಿತರಿದ್ದರು.


Spread the love