ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ವರ್ಗಾವಣೆ

Spread the love

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ    ವಿರುದ್ಧ  ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ(CID) ವರ್ಗಾವಣೆ ಮಾಡಲಾಗಿದೆ.

ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್​ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments