ಸೆಪ್ಟೆಂಬರ್ 13 ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ : ಯಶ್ಪಾಲ್ ಸುವರ್ಣ

Spread the love

ಸೆಪ್ಟೆಂಬರ್ 13 ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ : ಯಶ್ಪಾಲ್ ಸುವರ್ಣ

ಉಡುಪಿ: ನಗರಸಭೆ ಮತ್ತು ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಮಲ್ಪೆ ಇವರ ಆಶ್ರಯದಲ್ಲಿ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 13 ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಬೃಹತ್ ಉದ್ಯೋಗ ಮೇಳದ ಉದ್ಘಾಟನೆಯನ್ನು ಪೂರ್ವಾಹ್ನ 10 ಗಂಟೆಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಡಾ| ಎಚ್. ಎಸ್. ಬಲ್ಲಾಳ್, ಆಸ್ಪೆನ್ ಪಡುಬಿದ್ರಿಯ ಹಿರಿಯ ಪ್ರಬಂಧಕರಾದ ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಯೂನಿಯನ್ ಬ್ಯಾಂಕ್ ವಿಭಾಗೀಯ ಅಧಿಕಾರಿ ಶ್ರೀ ಅಶೋಕ್ ಭಾಂಡಗೆ, ಕೆನರಾ ಬ್ಯಾಂಕ್‌ ವೃತ್ತ ಕಚೇರಿ ಪ್ರಧಾನ ವ್ಯವಸ್ಥಾಪಕರಾದ ಎಚ್. ಕೆ. ಗಂಗಾಧರ್, ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್, ಆತ್ಮಾನಂದ ಸರಸ್ವತಿ ಐಟಿಐ ಬಿಲ್ಲಾಡಿ ಪ್ರಾಂಶುಪಾಲರಾದ ಶ್ರೀ ರೂಪೇಶ್ ಕುಮಾರ್, ಜ್ಞಾನ ಜ್ಯೋತಿ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀ ಪಾಂಡುರಂಗ ಮಲ್ಪೆ, ಜ್ಞಾನ ಜ್ಯೋತಿ ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಶ್ರೀ ಹರಿಯಪ್ಪ ಕೋಟ್ಯಾನ್, ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜ್ಞಾನೇಶ್ವರ್ ಕೋಟ್ಯಾನ್‌ ಉಪಸ್ಥಿತರಿರಲಿದ್ದಾರೆ.

ಉದ್ಯೋಗ ಮೇಳದಲ್ಲಿ 60 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 2 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments