ಸೆ.04 ರಿಂದ ಕೊಡಗಿನಲ್ಲಿ ದಸರಾ ಕ್ರೀಡಾಕೂಟ

Spread the love

ಸೆ.04 ರಿಂದ ಕೊಡಗಿನಲ್ಲಿ ದಸರಾ ಕ್ರೀಡಾಕೂಟ

ಮಡಿಕೇರಿ : ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏರ್ಪಡಿಸಲಾಗಿದೆ.

ಸೆ.04 ರಂದು ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆ.05 ರಂದು ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆ.06 ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಸೆ.07 ರಂದು ಸೋಮವಾರಪೇಟೆ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನ, ಸೆ.08 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್, 11 ಮತ್ತು 12 ರಂದು ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ. ಮಹಾಬಲ 9980887499, ಮಡಿಕೇರಿ ವೆಂಕಟೇಶ್ 9844326007, ಜಯರಾಂ 9480019815, ಸೋಮವಾರಪೇಟೆ ಸುಬ್ಬಯ್ಯ 8197790350 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here