ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ – ಕೋಟ ಶ್ರೀನಿವಾಸ ಪೂಜಾರಿ

Spread the love

ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಸೆಪ್ಟೆಂಬರ್ 1 ರಿಂದ ರಾಜ್ಯದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೆಪ್ಟೆಂಬರ್ 1 ರಿಂದ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡುವ ಸಂಬಂಧ ಮುಜರಾಯಿ ಇಲಾಖೆ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯು ಕೆಲ ಸೇವೆಗಳನ್ನು ಪುನಾರಂಭಿಸಬಹುದು ಎಂದು ಶಿಫಾರಸು ಮಾಡಿದರೆ ಮಾತ್ರ ದೇವಾಲಯಗಳಲ್ಲಿ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಆದಾಗ್ಯೂ, ಕೋವಿಡ್-19 ಹರಡುವುದನ್ನು ತಡೆಯಲು ದೇವಾಲಯಗಳಲ್ಲಿ ಅನ್ನ ಸಂತರ್ಪಣೆ ಮತ್ತು ಜನಸಂದಣಿಗೆ ಅನುಮತಿ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


Spread the love