ಸೆ. 10:  ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

Spread the love

ಸೆ. 10:  ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

ಉಡುಪಿ: ಕಥೊಲಿಕ್ ಎಜುಕೇಶನಲ್ ಸೊಸೈಟಿ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 9.30ಕ್ಕೆ  ಶನಿವಾರ ಉಡುಪಿ ಚರ್ಚ್ ವಠಾರದಲ್ಲಿರುವ ಧರ್ಮಾಧ್ಯಕ್ಷರ ನಿವಾಸದ ನೆಲಮಹಡಿಯ ಆವೆ ಮರಿಯಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಕಥೊಲಿಕ್ ಎಜುಕೇಶನಲ್ ಸೊಸೈಟಿ ಅಧ್ಯಕ್ಷರಾಗಿರುವ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಗೌರವ ಅತಿಥಿಗಳಾಗಿದೆ ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವಾಲಯದ ನಿವೃತ್ತ ಶಾಖಾಧಿಕಾರಿ ಅಕ್ಬರ್ ಆಲಿ ಭಾಗವಹಿಸಲಿದ್ದಾರೆ,

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ/ಶಿಕ್ಷಕೇತರರು, ಪ್ರತಿಭಾವಂತ ಶಿಕ್ಷಕರು/ವಿದ್ಯಾರ್ಥಿಗಳನ್ನು, ಅತ್ಯಧಿಕ ಫಲಿತಾಂಶ ಗಳಿಸಿದ ಶಿಕ್ಷಣ ಸಂಸ್ಥೆಗಳನ್ನು ಅಭಿನಂದಿಸಲಾಗುವುದು ಎಂದು ಕಥೊಲಿಕ್ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here