Spread the love
ಸೆ.12ರಂದು ರಾಷ್ಟ್ರೀಯ ಹೆದ್ದಾರಿ ಕಚೇರಿಗೆ ಮುತ್ತಿಗೆ: ಐವನ್ ಡಿಸೋಜ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳಲ್ಲಿ ಅಮಾಯಕರು ಪ್ರಾಣ ಕಳಕೊಳ್ಳುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ನಾದುರಸ್ಥಿಯೇ ಇದಕ್ಕೆ ಪ್ರಮುಖ ಕಾರಣವಾಗಿರುತ್ತದೆ. ಹಾಗಾಗಿ ಸೆ.12ರಂದು ಬೆಳಗ್ಗೆ 10:30ಕ್ಕೆ ನಗರದ ನಂತೂರು ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Spread the love