Home Mangalorean News Kannada News ಸೆ. 15 – ನ. 21 ರ ವರೆಗೆ ದಕ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ

ಸೆ. 15 – ನ. 21 ರ ವರೆಗೆ ದಕ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ

Spread the love

ಸೆ. 15 – ನ. 21 ರ ವರೆಗೆ ದಕ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮೀಕ್ಷೆಗೆ ಈಗಾಗಲೇ ಚಾಲನೆ ನೀಡಿದ್ದು, ಸೆಪ್ಟೆಂಬರ್ 15 ರಿಂದ 45 ಕಚೇರಿ ಕೆಲಸದ ದಿನಗಳ ಅವಧಿ ನವೆಂಬರ್ 21 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ, ಪುತ್ತೂರು/ ಬೆಳ್ತಂಗಡಿ/ ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ.

ಟ್ರಾನ್ಸ್ಜೆಂಡರ್ಸ್ರವರ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿಯು ಅತೀ ಅಗತ್ಯವಾಗಿರುವುದರಿಂದ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮುದಾಯದ ವ್ಯಕ್ತಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ನೊಂದಿಗೆ ಹಾಜರಾಗಿ ಮಾಹಿತಿಗಳನ್ನು ಒದಗಿಸಬೇಕು.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9480155501 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version