ಸೆ.16ರಿಂದ 24ರವರೆಗೆ ದಸರಾ ಯುವ ಸಂಭ್ರಮ

Spread the love

ಸೆ.16ರಿಂದ 24ರವರೆಗೆ ದಸರಾ ಯುವ ಸಂಭ್ರಮ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವ ಅಂಗವಾಗಿ ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರಲ್ಲಿ ಸೆ.16ರಿಂದ 24ರವರೆಗೆ ಯುವ ಸಂಭಮ ಕಾರ್ಯಕ್ರಮ ನಡೆಯಲಿದೆ.

ದಸರಾ ಮಹೋತ್ಸವದಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತಿಭೆ ಅನಾವಣರಣಕ್ಕೆ ಯುವ ಸಂಭಮ ಆಯೋಜಿಸುವ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ಸೆ.16ರಿಂದ ಯುವ ಸಂಭ್ರಮ ಆಯೋಜಿಸಲಾಗುತ್ತಿದೆ. ಸೆ.16ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಯುವ ಸಂಭಮಕ್ಕೆ ಚಾಲನೆ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ನಟ ಡಾಲಿ ಧನಂಜಯ ಭಾಗವಹಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧಕ್ಷತೆ ವಹಿಸಲಿದ್ದಾರೆ

ಯುವ ಸಂಭಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು ಮತ್ತು ರಾಜ್ಯದ ಇತರೆ ವಿವಿಗಳ ತಲಾ ಒಂದೊಂದು ತಂಡಗಳು ಸೇರಿ ಒಟ್ಟು 253 ತಂಡಗಳು ಕಾರ್ಯಕ್ರಮ ನೀಡಲಿವೆ. ಒಟ್ಟು 10500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪ್ರತಿ ತಂಡಕ್ಕೆ 10 ನಿಮಿಷಗಳ ಕಾಲಾವಕಾಶ ನೀಡಲಾಗಿದ್ದು, ಪ್ರತಿ ತಂಡದಲ್ಲಿ 30 ರಿಂದ 40ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ಬಾರಿಯ ಯುವ ಸಂಭ್ರಮಕ್ಕೆ ಸ್ವಾತಂತ್ರ್ಯ ಅಮೃತ ಮಹೋತ್ಸವ, ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ, ರಾಷ್ಟ್ರೀಯ ಭಾವೈಕ್ಯತೆ, ಕನ್ನಡ ಸಂಸ್ಕೃತಿ ಮತ್ತು ಜಾನಪದ ಕಲೆ, ಮಹಿಳಾ ಸಬಲೀಕರಣ, ಮಾದರಿ ಮೈಸೂರು ನಿರ್ಮಾಣಕ್ಕೆ ಅರಸರ ಕೊಡುಗೆ ಮತ್ತು ಪರಿಸರ ಸಂರಕ್ಷಣೆ ಸೇರಿ 9ವಸ್ತು ವಿಷಯಗಳನ್ನು ನೀಡಲಾಗಿದೆ. ಈ ಆಶಯಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಯುವ ಸಂಭಮದಲ್ಲಿ ನಿತ್ಯ 28 ತಂಡಗಳು ಪ್ರದರ್ಶನ ನೀಡಲಿದ್ದು, ಈ ವೇಳೆ ಅತ್ಯುತ್ತಮ ಪ್ರದರ್ಶನ ನೀಡಿದ 3 ತಂಡಗಳನ್ನು ನಿತ್ಯ ಆಯ್ಕೆ ಮಾಡಲಾಗುವುದು. ಒಟ್ಟು 18 ತಂಡಗಳಿಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಯುವ ದಸರಾದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುವುದು. ಕಲಾವಿದರನ್ನು ಗೌರವಿಸುವುದರ ಜತೆಗೆ ಪ್ರಯಾಣ ಭತ್ಯೆ, ವಸ್ತ್ರ ವಿನ್ಯಾಸದ ಖರ್ಚುವೆಚ್ಚ ನೀಡಲಾಗುತ್ತದೆ. ಪ್ರತಿದಿನ ಸಂಜೆ 5.30ರಿಂದ ರಾತ್ರಿ 10ರವರೆಗೆ ಕಾರ್ಯಕ್ರಮ ನಡೆಯಲಿದೆ


Spread the love

Leave a Reply

Please enter your comment!
Please enter your name here