ಸೆ. 16: ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ     ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

Spread the love

ಸೆ. 16: ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ     ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಈ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಲು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ 16 ನೇ ಸೆಪ್ಟೆಂಬರ್ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂತೆಯೇ 16 ನೇ ಸೆಪ್ಟೆಂಬರ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ವಿಶ್ವ ಹಿಂದು ಪರಿಷತ್ ಬಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

1 Comment

Leave a Reply