ಸೆ.17 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ -19 ಲಸಿಕಾ ಮೆಗಾ ಮೇಳ – ಜಿಲ್ಲಾಧಿಕಾರಿ ಕೂರ್ಮರಾವ್‌

Spread the love

ಸೆ.17 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ -19 ಲಸಿಕಾ ಮೆಗಾ ಮೇಳ – ಜಿಲ್ಲಾಧಿಕಾರಿ ಕೂರ್ಮರಾವ್‌

ಉಡುಪಿ: ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 2ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 80000 ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಕೇಂದ್ರ ಸರ್ಕಾರವು ದೇಶದ ಅರ್ಹ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಡಿಸೆಂಬರ್ 31 2021 ರ ಒಳಗಾಗಿ ಶೋವಿಡ್-19 ಲಸಿಕೆಯನ್ನು ನೀಡುವಲ್ಲಿ ನೂರು ಶೇಕಡಾ ಪ್ರಗತಿಯನ್ನು ಸಾಧಿಸುವ ಗುರಿಯನ್ನು ಇಟ್ಟುಕೊಂಡಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿಯೂ ಸಹ ಮಾನ್ಯ ಮುಖ್ಯ ಮಂತ್ರಿಯವರು ನವೆಂಬರ್ 30, 2021 ರ ಒಳಗಾಗಿ ರಾಜ್ಯದ ಎಲ್ಲಾ ಅರ್ಹ 18 ವರ್ಷ ಮೇಲ್ಪಟ್ಟ ನಾಗರೀಕರಿಗೆ ಕೋವಿಡ್ -19 ಲಸಿಕಾಕರಣ ನೀಡುವಲ್ಲಿ ನೂರು ಪ್ರತಿಶತ ಪ್ರಗತಿಯನ್ನು ಸಾಧಿಸುವ ಗುರಿಯನ್ನು ಹೊಂದಲಾಗಿದೆ

ಈ ಸಂಬಂಧ ಮಾನ್ಯ ಮುಖ್ಯ ಮಂತ್ರಿಯವರು ರಾಜ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ಲಸಿಕ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಉಡುಪಿ ಜಿಲ್ಲೆಯಲ್ಲಿ ಸೆ. 17 ರಂದು ಕೋವಿಡ್ -19 ಲಸಿಕಾ ಮಗಾ ಮೇಳ ಜರುಗಲಿದ್ದು, ಅರ್ಹ 18 ವರ್ಷ ಮೇಲ್ಪಟ್ಟವರಿಗೆ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಲಸಿಕಾ ಮಹಾಮೇಳ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾಕರಣದಲ್ಲಿ ಭಾಗವಹಿಸಿ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ವಿನಂತಿಸಿದರು.

ಜಿಲ್ಲೆಯಲ್ಲಿ 80,000 ಡೋಸ್ ಲಸಿಕೆ ಲಭ್ಯವಿದ್ದು, ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 18 ವರ್ಷ ಮೇಲ್ಪಟ್ಟವರ ಗುರಿ 10,02,762 ಆಗಿದ್ದು, ಇದುವರೆಗೆ 1ನೇ ಡೋಸ್ ಲಸಿಕೆಯನ್ನು 8,47,94) (84.6) ಜನರಿಗೆ ನೀಡಲಾಗಿದೆ. ಹಾಗೂ ಇವರಲ್ಲಿ ಈಗಾಗಲೇ 3,45,558 (34.5W) ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದಿರುತ್ತಾರೆ ಎಂದರು.

ಈ ಮೆಗಾ ಮೇಳದಲ್ಲಿ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶೂಷಕಿಯರು, ಹಿರಿಯ/ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಟಾಸ್ಕ್ ಫೋರ್ಸ್ ಕಮಿಟಿಯ ಸದಸ್ಯರು, ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳು ಹಾಗೂ ಶುಕ್ರೂಷಕ ಸಿಬ್ಬಂದಿ, ನರ್ಸಿಂಗ್ ಕಾಲೇಜಿನ ಶುಕ್ರೂಷಕರು/ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಭಾಗವಹಿಸಲಿರುವರು.

ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್ 16ರ ಬೆಳಿಗ್ಗೆ 10.00 ರಿಂದ 11.00 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನಿ ಕುಮಾರ್ ಇವರು ಫೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂಧಿಸಿ ಪ್ರಶ್ನೆಗಳನ್ನು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ 9663957222 ನ್ನು ಸಂಪರ್ಕಿಸುವಂತೆ ತಿಳಿಸಿದರು.

ಪ್ರಥಮ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಮತ್ತು ಪ್ರಥಮ ಡೋಸ್ ಲಸಿಕೆ ಪಡೆದು 84 ದಿವಸ ದಾಟಿದವರು ದಿನಾಂಕ: 17.09.2021 ರಂದು ವಿಶ್ 19 ಲಸಿಕಾ ಮೆಗಾ ಮೇಳದ ಕೋವಿಡ್ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆದುಕೊಳ್ಳಿ. ಮತ್ತು ಕೋವಿಡ್ 3ನೇ ಅಲೆ ತಡೆಗಟ್ಟಿ ಮಹಾಮಾರಿ ಹೊಡೆದೋಡಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶವ ಪ್ರಭು, ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಡಾ ನವೀನ್‌ ಭಟ್‌ ಉಪಸ್ಥಿತರಿದ್ದರು.


Spread the love