ಸೆ.2 ರಂದು ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ

Spread the love

ಸೆ.2 ರಂದು ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ

ಮಂಗಳೂರು: ಗಣೇಶೋತ್ಸವ ವಿಸರ್ಜನೆ ಮೆರವಣಿಗೆಗಳು ಇರುವ ಕಾರಣದಿಂದ ಸೆಪ್ಟೆಂಬರ್ 2 ರಂದು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಸೆ.2 ರಂದು ಮಂಗಳೂರು ಕಮೀಷನರ್‌ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹಗಳು ವಿಸರ್ಜನೆಯಾಗಲಿವೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಸ್ನಾತಕೋತ್ತರ,ಡಿಪ್ಲೋಮಾ, ಐಟಿಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ಹೋಗಬೇಕೆಂದು ಆದೇಶದಲ್ಲಿ ಹೇಳಲಾಗಿದೆ.

ಸೆ. 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಮಂಗಳೂರಿಗೆ ಬರಲಿದ್ದಾರೆ.


Spread the love

Leave a Reply

Please enter your comment!
Please enter your name here