ಸೆ. 20ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Spread the love

ಸೆ. 20ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ.20ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ವಿವರ ಇಂತಿದೆ: ಸೆ.20ರ ಬುಧವಾರ ಬೆಳಿಗ್ಗೆ 8.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9 ಗಂಟೆಗೆ ಸಕ್ರ್ಯೂಟ್ ಹೌಸ್ ಗೆ ತೆರಳುವರು. 9.30ಕ್ಕೆ ನಗರದ ದಿ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ಮಂಗಳೂರು ಟ್ರೇಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿ ಚರ್ಚೆ ನಡೆಸುವರು. 10.30ಕ್ಕೆ ನಗರದ ಪಿವಿಎಸ್ ಸರ್ಕಲ್ನಲ್ಲಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ ಮತ್ತು ಬಂಟ್ವಾಳ ತಾಲೂಕಿನ ಅಂಬೇಡ್ಕರ್ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11.45ಕ್ಕೆ ಸಂತ ಅಲೋಶಿಯಸ್ ಕಾಲೇಜ್ ಆವರಣದಲ್ಲಿ ಆಯೋಜಿಸಿರುವ ಎಚೋಸ್ ಆಫ್ ದಿ ಕ್ವಾರಿಡೋರ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12.15ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೆÉೀಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಅಲ್ಲಿಂದ ಸಂಜೆ 5.30ಕ್ಕೆ ಬಂಟ್ಸ್ಸ್ ಹಾಸ್ಟೆಲ್ ಓಂಕಾರ ನಗರದ ಬಂಟರೆ ಯಾನೆ ನಾಡವರ ಮಾತೃ ಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ವತಿಯಿಂದ ಆಯೋಚಿಸಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವರು. 6.30ಕ್ಕೆ ನಗರದ ಜಪ್ಪಿನ ಮೊಗರು ಬಂಟರ ಸಂಘದ ಪ್ರಾಯೋಜಕತ್ವದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here