ಸೆ. 27: ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Spread the love

ಸೆ. 27: ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಉಡುಪಿ: ನಗರ ಹಾಗೂ ರಾಷ್ಟ್ರೀಯ ಹೆದ್ದಾರಿಯ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಪ್ಟೆಂಬರ್ 27 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಉಡುಪಿ ನಗರ ಭಾಗದ ಹೆಚ್ಚಿನ ರಸ್ತೆಗಳು ಹಾಗೂ ಮಲ್ಪೆ‌ಯಿಂದ ಪರ್ಕಳದ ವರೆಗಿನ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳಿಗೆ ನಡೆದಾಡಲು ಕೂಡ ಅಸಾಧ್ಯವಾಗಿದ್ದು ಸಾರ್ವಜನಿಕರು ಅನುಭವಿಸುತ್ತಿರುವ ಕಷ್ಟವನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ವಿನೂತನ ರೀತಿಯಲ್ಲಿ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯು ಸಪ್ಟೆಂಬರ್ 27ರಂದು ಮಂಗಳವಾರ ಸಂಜೆ 3.30ಕ್ಕೆ ಸರಿಯಾಗಿ ಕಲ್ಮಾಡಿ ಜಂಕ್ಷನ್‌ನಿಂದ(ಕಲ್ಮಾಡಿ ಚರ್ಚ್‌ನ ಬಳಿಯಿಂದ) ಪಾದಯಾತ್ರೆಯು ಹೊರಟು ಕರಾವಳಿ ಬೈಪಾಸ್ ಬಳಿ ಪ್ರತಿಭಟನೆಯು ಅಂತ್ಯವಾಗುವುದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love