ಸೆ. 28 ರಿಂದ ಶ್ರೀರಂಗಪಟ್ಟಣ ದಸರಾ

Spread the love

ಸೆ. 28 ರಿಂದ ಶ್ರೀರಂಗಪಟ್ಟಣ ದಸರಾ

ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಸೆಪ್ಟೆಂಬರ್ 28 ರಂದು ಬುಧವಾರ ಮಧ್ಯಾಹ್ನ 2.15 ಗಂಟೆಗೆ ಕಿರಂಗೂರು ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದೆ.

ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಧ್ಯಾಹ್ನ : 3 ಗಂಟೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಉದ್ಘಾಟಿಸಲಿದ್ದಾರೆ. ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ , ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ, ಸಹಕಾರ ಸಚಿವರು ಎಸ್.ಟಿ. ಸೋಮಶೇಖರ್, ಮುಜರಾಯಿ ಹಾಗೂ ಹಜ್ ಮತ್ತು ವಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರು ಎ.ಎಸ್. ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸೆಪ್ಟೆಂಬರ್ 29 ರಂದು ಸಂಜೆ 6.30 ಕ್ಕೆ ಶ್ರೀ ರಂಗನಾಥ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಾ ಸಾನಿಧ್ಯದಲ್ಲಿ ಕಾರ್ಯಕ್ರಮವನ್ನು ಕಂದಾಯ ಸಚಿವರಾದ ಆರ್ ಆಶೋಕ್ ರವರು ಉದ್ಘಾಟಿಸಲಿದ್ದಾರೆ. ಅಬಕಾರಿ ಸಚಿವ ಗೋಪಾಲಯ್ಯ ಕೆ. ಅವರು ದಸರಾ ಕುರಿತು ಮಾತನಾಡಲಿದ್ದಾರೆ.

ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡೆ ಸಚಿವರು ಡಾ. ಕೆ.ಸಿ. ನಾರಾಯಣಗೌಡ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ ವಹಿಸಲಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರು ಎ.ಎಸ್. ರವೀಂದ್ರ ಶ್ರೀಕಂಠಯ್ಯ ರವರು ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀರಂಗ ವೇದಿಕೆಯಲ್ಲಿ ಪ್ರತಿದಿನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಸಂಗೀತ ರಸ ಸಂಜೆಯಲ್ಲಿ ಖ್ಯಾತ ನಟ, ನಟಿಯರು, ಗಾಯಕ, ಗಾಯಕಿಯರಿಂದ ಆಕಷಕ ಹಾಗೂ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಲಿದೆ

ಅಕ್ಟೋಬರ್ 2 ರಂದು ನಾಡಹಬ್ಬ ಶ್ರೀ ರಂಗಪಟ್ಟಣ ದಸರಾ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಆವರಣದ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ.

ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥನಾರಾಯಣ್ ಉದ್ಘಾಟಿಸಲಿದ್ದಾರೆ. ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡೆ ಸಚಿವ ಡಾ. ಕೆ.ಸಿ. ನಾರಾಯಣಗೌಡ, ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಆನಂದ್ ಸಿಂಗ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಘನ ಉಪಸ್ಥಿತಿ ವಹಿಸಲಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಡ್ಯ ಸಂಸದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ವಿಧಾನಸಭಾ ಶಾಸಕರಾದ ಸಿ.ಎಸ್. ಪುಟ್ಟರಾಜು, ಸುರೇಶ್‌ಗೌಡ, ಡಾ.ಕೆ.ಅನ್ನದಾನಿ, ಎಂ ಶ್ರೀನಿವಾಸ್, ಶ್ರೀ ರಂಗಪಟ್ಟಣ ಪುರಸಭೆಯ ಅಧ್ಯಕ್ಷೆ ನಿರ್ಮಲ ವೇಣುಗೋಪಾಲ್, ಉಪಾಧ್ಯಕ್ಷ ಕೃಷ್ಣಪ್ಪ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ವೇದ ಬ್ರಹ್ಮ ಡಾ.ಬಾನು ಪ್ರಕಾಶ್ ಶರ್ಮಾ, ಕಿರಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಗೋವಿಂದಪ್ಪ, ಶ್ರೀ ನಿಮಿಷಾಂಬ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.


Spread the love