ಸೆ. 7 ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

Spread the love

ಸೆ. 7 ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವೆ ಸಾಧ್ಯತೆಯಿದ್ದು ಸೆಪ್ಟೆಂಬರ್ 6 ಮಧ್ಯಾಹ್ನ 1 ಗಂಟೆಯಿಂದ ಹವಾಮಾನ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆ. 6, 8, 9 ಆರೆಂಜ್ ಅಲರ್ಟ್ ಘೋಷಿಷಲಾಗಿದ್ದು, ಸೆ. 7 ರಂದು ರೆಡ್ ಅಲರ್ಟ್ ಘೊಷಿಸಲಾಗಿದೆ.

ಮೇಲೆ ತಿಳಿಸಿದ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳನ್ನು/ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು

ಸಾರ್ವಜನಿಕರು ನದಿ/ನೀರು ಇರುವ ಪ್ರದೇಶ/ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ತಿಳಿಸಿದೆ.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ ಮರಗಳ ಹತ್ತಿರ/ ಕೆಳಗೆ ನಿಲ್ಲಬಾರದು ಮತ್ತು ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವುದು.


Spread the love

Leave a Reply

Please enter your comment!
Please enter your name here