ಸೈಬರ್ ವಂಚನೆಗೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ
ಮಂಗಳೂರು: ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 45/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ.
ಬಂಧಿತರನ್ನು ತ್ರಿಪುರಾದ ದಾಮೆನ್ ಜೊಯ್ ರೆನಾಗ್ (27) ಮತ್ತು ಮಣಿಪುರದ ಹಮಗಿತ್ ರೆಯಲ್ ಕೊಮ್ (33) ಎಂದು ಗುರುತಿಸಲಾಗಿದೆ
ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ Damenjoy Reang ಎಂಬಾತನನ್ನು ದಿನಾಂಕ: 13-11-2025 ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿರುತ್ತದೆ.
ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ Hmngte Reail kom @ Mangte amosh ಎಂಬಾತನನ್ನು ದಿನಾಂಕ: 15-11-2025 ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ದಿನಾಂಕ:16-11-2025 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿರುತ್ತದೆ.
ತನಿಖೆಯ ವೇಳೆ ಆರೋಪಿತನಾದ Hmngte Reail kom @ Mangte amosh ಎಂಬಾತನು 300 ಕ್ಕೂ ಹೆಚ್ಚೂ ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಸೈಬರ್ ವಂಚನೆಗ ಬಳಕೆ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಆರೋಪಿತನಿಂದ 08-ಮೊಬೈಲ್ ಫೋನ್ ಗಳು, 20- ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಸದ್ರಿ ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿರವರು ಭಾಗವಹಿಸಿರುತ್ತಾರೆ.
