ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಸರ್ಕಾರದಿಂದ ಜನತೆಗೆ ತೈಲ ಬೆಲೆ ಏರಿಕೆ ಬರೆ – ಯಶ್ಪಾಲ್ ಸುವರ್ಣ

Spread the love

ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಸರ್ಕಾರದಿಂದ ಜನತೆಗೆ ತೈಲ ಬೆಲೆ ಏರಿಕೆ ಬರೆ – ಯಶ್ಪಾಲ್ ಸುವರ್ಣ

ಉಡುಪಿ: ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಹೊರಿಸಿ ಭಾಗ್ಯ ಗ್ಯಾರಂಟಿಗಳ ನೆಪದಲ್ಲಿ ಖಜಾನೆ ತುಂಬಿಸಲು ಜನತೆಗೆ ಬರೆ ಎಳೆದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love