ಸ್ಥಳೀಯಾಡಳಿತ ಮೂಲಕವೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ : ಶಾಸಕ ಯಶ್ ಪಾಲ್ ಸುವರ್ಣ

Spread the love

ಸ್ಥಳೀಯಾಡಳಿತ ಮೂಲಕವೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜನ ಸಾಮಾನ್ಯರ ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ  ಯಶ್ ಪಾಲ್ ಸುವರ್ಣ ರವರು ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ರಹ್ಮಾವರ ತಹಶೀಲ್ದಾರ್  ರಾಜಶೇಖರ್ ಮೂರ್ತಿ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬ್ರಹ್ಮಾವರ ತಾಲೂಕಿನ ಜನ ಸಾಮಾನ್ಯರ ಬೇಡಿಕೆಗಳಾದ ರೇಶನ್ ಕಾರ್ಡ್, ತ್ಯಾಜ್ಯ ಸಂಸ್ಕರಣಾ ಘಟಕ, ಹಕ್ಕುಪತ್ರ, ಮಳೆಗಾಲದ ಪೂರ್ವ ಸಿದ್ಧತೆ , ಗ್ರಾಮ ಪಂಚಾಯತ್ ಮಟ್ಟದಲ್ಲಿ ಲೈಸೆನ್ಸ್, ಸರ್ವೇ ಕಾರ್ಯ ವಿಳಂಬ ಹಾಗೂ ಸ್ಥಳೀಯ ಪಂಚಾಯತ್ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ತುರ್ತು ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಎಚ್ ವಿ ಇಬ್ರಾಹಿಂಪುರ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ನಿರಂಜನ್ ಪೂಜಾರಿ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love