ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅನುದಾನ ಹೆಚ್ಚಿಸುವಂತೆ ಮನವಿ

Spread the love

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅನುದಾನ ಹೆಚ್ಚಿಸುವಂತೆ ಮನವಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ ರೂ.2.00 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು

ರಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು ರೂ 2.00 ಕೋಟಿಯಿಂದ ರೂ 25.00 ಕೋಟಿಗಳಿಗೆ ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು, ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ ರೂ 2.00 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿಯು ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಭಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮಗೆ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ಧಿ ರೂ 2.00 ಕೋಟಿ ಅನುದಾನವನ್ನು ಕನಿಷ್ಠ ರೂ 10.00 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ಸಭಾನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.

ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್, ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು


Spread the love