ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

Spread the love

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

ಮಂಗಳೂರು: ಕೊಲೆ ಯತ್ನ ಸೇರಿದಂತೆ ಹಲವಾರು ಪ್ರಕರಣಗಳಿಗೆ ಸಂಬಂಧಿಸಿ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ಇಂದು ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುಂಡೇಟಿಗೆ ಒಳಗಾದ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ.

ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಾಹ ಆರೋಪಿಯು‌ ಪೊಲೀಸರ ಮೇಲೆರೆಗಿ ತಪ್ಪಿಸಲು‌ ಮುಂದಾದ ಎನ್ನಲಾಗಿದೆ.

ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಗುಂಡೇಟು ಹಾಕಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love