‘ಸ್ಪೀಕ್ ಆಫ್ ಕರ್ನಾಟಕ’ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ದಿನೇಶ್ ಗುಂಡೂರಾವ್, ಜಯಮಾಲಾಗೆ ಸ್ವಾಗತ

Spread the love

‘ಸ್ಪೀಕ್ ಆಫ್ ಕರ್ನಾಟಕ’ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ದಿನೇಶ್ ಗುಂಡೂರಾವ್, ಜಯಮಾಲಾಗೆ ಸ್ವಾಗತ

ಉಡುಪಿ: ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ಸ್ಪೀಕ್ ಆಫ್ ಕರ್ನಾಟಕ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವೆ ಡಾ| ಜಯಮಾಲ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪರವಾಗಿ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿಯವರು ನಗರದ ಪ್ರವಾಸಿ ಮಂದಿರದಲ್ಲಿ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವೆ ಡಾ| ಜಯಮಾಲ ಅವರನ್ನು ಹಾರ ಹಾಕಿ ಸ್ವಾಗತಿಸಿದರು.

ಬಳಿಕ ಪಕ್ಷದ ಕಾರ್ಯಕ್ರಮಗಳ ಬಗ್ಗೆ, ಜಿಲ್ಲೆಯಲ್ಲಿ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಪಕ್ಷದ ವತಿಯಿಂದ ನಡೆಸಲಾದ ಚಟುವಟಿಕೆ, ಕುರಿತು ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವೆ ಡಾ| ಜಯಮಾಲ ಅವರಿಗೆ ಮಾಹಿತಿ ನೀಡಲಾಯಿತು.

ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು ಆರ್ ಸಭಾಪತಿ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಜಿ ಎಬಾವಾ, ನಿತ್ಯಾನಂದ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ ಕಾಪು ಹಾಗೂ ಇತರರು ಉಪಸ್ಥಿತರಿದ್ದರು.


Spread the love