ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ ಎಡಿಜಿಪಿ ಭಾಸ್ಕರ್ ರಾವ್‌

Spread the love

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ ಎಡಿಜಿಪಿ ಭಾಸ್ಕರ್ ರಾವ್‌

ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಗೊತ್ತಾಗಿದೆ.

‘ವೈಯಕ್ತಿಕ ಕಾರಣದಿಂದ ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ನನ್ನ ಅರ್ಜಿ ಪರಿಗಣಿಸಬೇಕು’ ಎಂದು ಕೋರಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಅರ್ಜಿ ನೀಡಿರುವುದಾಗಿ ಆಪ್ತ ಮೂಲಗಳು ಹೇಳಿವೆ.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪಡೆದಿದ್ದ ಭಾಸ್ಕರ್ ರಾವ್ , 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ ಆಗಿ ಸೇವೆ ಆರಂಭಿಸಿದ್ದರು. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಸದ್ಯ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಎಡಿಜಿಪಿ ಸಂಜಯ್ ಸಹಾಯ್ ಸಹ ಸ್ವಯಂ ನಿವೃತ್ತಿ ಪಡೆದಿದ್ದರು.

ರಾಜಕೀಯ ಸೇರ್ಪಡೆ ಸಾಧ್ಯತೆ: ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸುವ ಸಾಧ್ಯತೆ ಇದೆ. ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳೂ ಕೇಳಿಬರುತ್ತಿವೆ.

ಭಾಸ್ಕರ್ ರಾವ್ ಅವರಿಗೆ ಕಾಂಗ್ರೆಸ್ ಅಥವಾ ಆಮ್‌ ಆದ್ಮಿ ಪಾರ್ಟಿ ವತಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.


Spread the love