ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಂಭ್ರಮದ ಪಾದಯಾತ್ರೆಗೆ ಸಿದ್ಧತೆ:- ಕೆ.ಹರೀಶ್ ಕುಮಾರ್

Spread the love

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಂಭ್ರಮದ ಪಾದಯಾತ್ರೆಗೆ ಸಿದ್ಧತೆ:- ಕೆ.ಹರೀಶ್ ಕುಮಾರ್

ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆಪಿಸಿಸಿ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಸುಮಾರು 75 ಕಿ.ಮೀ ದೂರದಷ್ಟು ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 9ನೇ ತಾರೀಕಿನಿಂದ 14 ರವರೆಗೆ ನಡೆಯಲಿರುವ ಪಾದಯಾತ್ರೆಯುದ್ದಕ್ಕೂ ಶಾಂತಿ, ಸಾಮರಸ್ಯ, ಸೌಹಾರ್ದತೆಯ ಸಂದೇಶ ಸಾರಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು. ಪಾದಯಾತ್ರೆಯು ಉಪ್ಪಿನಂಗಡಿಯಿಂದ ಆರಂಭಗೊಂಡು ಮುಲ್ಕಿಯಲ್ಲಿ ಸಮಾಪನಗೊಳ್ಳಲಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರುಗಳು ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊಯ್ದೀನ್ ಬಾವ, ಕಾಂಗ್ರೆಸ್ ಮುಖಂಡರುಗಳಾದ ಬಿ.ಇಬ್ರಾಹೀಂ, ಸದಾಶಿವ್ ಉಳ್ಳಾಲ್, ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ನಾರಾಯಣ ನಾಯಕ್, ಶಾಹುಲ್ ಹಮೀದ್, ಮೋಹನ್ ಗೌಡ, ಜೋಕ್ಕಿಂ ಡಿಸೋಜಾ, ಸುದರ್ಶನ್ ಜೈನ್, ಸಚಿನ್ ರಾಜ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳು, ಮಾಜಿ ಕೆಪಿಸಿಸಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಸಂತೋಷ್ ಕುಮಾರ್ ಶೆಟ್ಟಿ, ಸಿ.ಎಂ. ಮುಸ್ತಫಾ, ನೀರಜ್ ಪಾಲ್, ಪ್ರೇಮ್ ಬಳ್ಳಾಲ್ ಭಾಗ್, ಅಬ್ದುಲ್ ಸಲೀಂ, ಖಾಲಿದ್ ಉಜಿರೆ ಸಹಕರಿಸಿದರು.


Spread the love