ಸ್ವಾವಲಂಬಿ ಭಾರತ ಅಭಿಯಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಚಾಲನೆ

Spread the love

ಸ್ವಾವಲಂಬಿ ಭಾರತ ಅಭಿಯಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಚಾಲನೆ

ಕುಂದಾಪುರ: ಸ್ವಾವಲಂಬಿ ದೇಶದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಹತ್ತಾರು ಕಾರ್ಯಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಪ್ರತಿ ಮನೆ-ಮನೆಗೂ ತಲುಪಿಸುವ ಕಾರ್ಯವೇ ಸ್ವಾವಲಂಬಿ ಭಾರತ ಅಭಿಯಾನ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಅವರು ಸೋಮವಾರ ತ್ರಾಸಿ ಸಮೀಪದ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆದ ಬೈಂದೂರು ವಲಯದ ಸ್ವಾವಲಂಬಿ ಭಾರತ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಈಗಲೂ ಹಿಂದೂ ಯುವಶಕ್ತಿಗಳನ್ನು ಧಮನಿಸುವ ದುಷ್ಕೃತ್ಯ ದೇಶದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಂತ-ಹಂತವಾಗಿ ಈ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಪ್ರವೀಣ್ ನೆಟ್ಟಾರು, ಹರ್ಷರಂತಹ ಅನೇಕ ಯುವಕರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶ ಎಲ್ಲ ರಂಗದಲ್ಲೂ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಹಿಂದೂ ರಾಷ್ಟ್ರಕ್ಕೆ ಶಕ್ತಿ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸ್ವಾವಲಂಬಿ ಭಾರತ ಅಭಿಯಾನದ ಜಿಲ್ಲಾ ಸಂಯೋಜಕ ವಿಜಯ ಕೊಡವೂರು ಕಾರ್‍ಯಕ್ರಮದ ರೂಪು-ರೇಷೆಗಳ ಕುರಿತಂತೆ ಮಾಹಿತಿ ನೀಡಿದರು. ಸಹ ಸಂಯೋಜಕ ಪ್ರಸನ್ನ ಕುಮಾರ್ ಉಪ್ಪುಂದ ಪ್ರಸ್ತಾವಿಸಿ, ಸ್ವಾಗತಿಸಿದರು.


Spread the love