ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ ಸರಕಾರ: ಪ್ರಿಯಾಂಕ್ ಖರ್ಗೆ

Spread the love

ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ ಸರಕಾರ: ಪ್ರಿಯಾಂಕ್ ಖರ್ಗೆ

ರಾಜ್ಯ ಬಿಜೆಪಿ ಸರಕಾರವು ಜನರಿಗೆ ನೀಡಿರುವ ಭರವಸೆಗಳನ್ನು ಮೂಲೆಗೆ ತಳ್ಳಿ ಬರೇ ಹಗರಣಗಳಲ್ಲೇ ಮುಳುಗಿದ್ದು, ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.

ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಗರಣಗಳೇ ಹೆಚ್ಚುತ್ತಿದ್ದು, ಬೆಲೆಏರಿಕೆ, ನಿರುದ್ಯೋಗ ಸಮಸ್ಯೆ, ಕೋಮು ಸಂಘರ್ಷ, ಆರ್ಥಿಕ ಕುಸಿತಗಳಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದಾರೆ ಎಂದ ಅವರು, ರಾಹುಲ್ ಗಾಂಧಿ ಯವರ ಭಾರತ್ ಜೋಡೊ ಕಾರ್ಯಕ್ರಮವು ದೇಶದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಲಿದೆ ಎಂದರು.

ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಜಿ ಜಾನ್ ಮಾತನಾಡಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ 3570 ಕೀ.ಮೀ ಭಾರತ್ ಜೋಡೊ ಪಾದಯಾತ್ರೆ ಆಯೋಜಿಸಲಾಗಿದ್ದು, ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನಿಡಿದರು.

ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ಮುಧುಬಂಗಾರಪ್ಪ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಐವನ್ ಡಿಸೋಜಾ, ಮೊಯ್ದೀನ್ ಬಾವ, ಜೆ.ಆರ್.ಲೋಬೊ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರ.ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳು, ಬ್ಲಾಕ್ ಉಸ್ತುವಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯು.ಎಚ್. ಖಾಲಿದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೀರಜ್ ಚಂದ್ರ ಪಾಲ್ ಸಹಕರಿಸಿದರು.


Spread the love

Leave a Reply

Please enter your comment!
Please enter your name here